ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಿ: ಎಂ.ಎಸ್ ದಿವಾಕರ್

ಹೊಸಪೇಟೆ ನಗರದಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ದಶಮಾನೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ್ರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ, ನೀವು ಅವುಗಳ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಉನ್ನತವಾಗಿ ಬದುಕಬೇಕು, ನೀವು ಓದುವ ಶಾಲೆಗೂ ಮತ್ತು ಊರಿಗೆ ಒಳ್ಳೆಯ ಹೆಸರು ತರುವ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡ್ಬೇಕು ಎಂದ್ರು.

ಇದೇ ವೇಳೆ ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಅವರ ತಾಯಿ ನಾಗರತ್ನಮ್ಮ, ಜಿ.ಪಂ ಸಿಇಒ ನೊಂಗ್ಜಾಯ್ ಮೊಹಮ್ಮದ ಅಲಿ ಅಕ್ರಂ ಪಾಷ ಅವರ ತಾಯಿ ಸಫೀನಾ ಹೆಸರುಗಳಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಸಸಿಗಳನ್ನ ನೀಡಲಾಯಿತು.

ಇದೇ ವೇಳೆ ಪ್ರತಿಜ್ಞಾ ವಿಧಿಯನ್ನ ಜಿಲ್ಲಾಧಿಕಾರಿಗಳು ಮಕ್ಕಳಿಗೆ ಬೋಧನೆ ಮಾಡಿದರು.

ವಿಜ್ಞಾನ ಕಾಲೇಜ್ ನಲ್ಲಿ ಹುಡುಗರಿಗೆ ಲಿಂಗ ತಾರತಮ್ಯದ ಕುರಿತು ಅರಿವು, ಹೆಣ್ಣು ಭ್ರೂಣ ಲಿಂಗ ಹತ್ಯೆ, ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು, ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ದೃಷ್ಠಿಕೊನ ಬದಲಾಯಿಸುವುದು, ಎಲ್ಲಾ ಹೆಣ್ಣು ಮಕ್ಕಳಿಗೆ ಮಾಹಿತಿ ಮತ್ತು ಸೌಲಭ್ಯ ಹಾಗೂ ಅವಕಾಶಗಳನ್ನು ಒದಗಿಸಿಕೊಡುವುದು ಕುರಿತಾಗಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಸಲೀಂ ಪಾಷ, ಜಿಲ್ಲಾ ನಿರೂಪಣಾ ಅಧಿಕಾರಿ ಸುಭದ್ರಾ ದೇವಿ, ಸಿಡಿಪಿಒ ಸಿಂದು ಅಂಗಡಿ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು, ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ಅಂಬುಜಾ,ಜಿಲ್ಲಾ ಮಿಶನ್ ಸಂಯೋಜಕರಾದ ಶಿವಣ್ಣ, ನೇತ್ರಾ ಹರ್ತಿ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಮಕ್ಕಳ ರಕ್ಷಾಧಿಕಾರಿ ಗಂಗಾಧರ ಡೊಳ್ಳಿನ ವಿಜ್ಞಾನ ಕಾಲೇಜ್ ನ ನಿರ್ದೇಶಕಿ ವಿನುತಾ, ಪ್ರಾಚಾರ್ಯ ಫರೀದಾ ಆಡಳಿತ ಅಧಿಕಾರಿ ಕಿರಣ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಮತ್ತು ಜಿ.ಪಂ ಸಿಇಒ ನೊಂಗ್ಜಾಯ್ ಮೊಹಮ್ಮದ ಅಲಿ ಅಕ್ರಂ ಪಾಷ ಅವರು ಸಹಿ ಸಂಗ್ರಹ ಮಾಡಿದರು.

ಪ್ರತಿಜ್ಞಾ ವಿಧಿಯನ್ನ ಜಿಲ್ಲಾಧಿಕಾರಿಗಳು ಮಕ್ಕಳಿಗೆ ಬೋಧನೆ ಮಾಡಿದರು.

https://www.facebook.com/share/v/1Xztka4mmN

ಬಿಟಿವಿ ಮತ್ತು ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ವಿಡಿಯೋಗಳ ಪೋಟೋ

Similar Articles

Leave a Reply