ದಿನಾಂಕ: 18/08/2025 ರಂದು ಡಣಾಯಕನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಂಕರ್ ನಾಯ್ಕ್.

ದೇವಲಾಪುರ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮರಿಯಮ್ಮನಹಳ್ಳಿ ಆರೋಗ್ಯ ಸಮುದಾಯ ಕೇಂದ್ರ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ (ರಿ) ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಂಕರ್ ನಾಯ್ಕ್ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ತಪಾಸಣೆ ಶಿಬಿರದ ಕಾರ್ಯಕ್ರಮ ಉದ್ದೇಶಿಸಿ ಬಿಎಂಎA ಕಂಪನಿಯ ಮಾನವ ಸಂಪನ್ಮೂಲಧಿಕಾರಿ ಗಣೇಶ್ ಹೆಗಡೆ ಮಾತನಾಡಿದರು.


ದೇವಲಾಪುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಾರ್ವಜನಿಕರು ಭಾಗಿಯಾಗಿರುವುದು.

ಶಿಬಿರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಹೃದಯ ರೋಗ, ನರ ರೋಗ, ಕೀಲು ಮೂಳೆ ಮತ್ತು ಕ್ಯಾನ್ಸರ್ ರೋಗ ತಜ್ಞರು ಭಾಗವಹಿಸಿದ್ದರು.



